ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಕರ್ನಾಟಕ ಸರ್ಕಾರ ಸಚಿವಾಲಯದ ವಿವಿಧ ಇಲಾಖೆಗಳಲ್ಲಿನ, ಕರ್ನಾಟಕ ವಿಧಾನ ಮಂಡಲ ಮತ್ತು ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಸೇವೆ ಸಲ್ಲಿಸುತ್ತಿರುವ ವಿವಿಧ ವೃಂದದ ಅಧಿಕಾರಿ ಮತ್ತು ನೌಕರರುಗಳಿಗೆ ತರಬೇತಿಯನ್ನು ಹಾಗೂ ಕರ್ನಾಟಕ ಸರ್ಕಾರ ಸಚಿವಾಲಯಕ್ಕೆ ಹೊಸದಾಗಿ ನೇರ ನೇಮಕಾತಿ ಹೊಂದಿದ ಶಾಖಾಧಿಕಾರಿಗಳು, ಸಹಾಯಕರು, ಕಿರಿಯ ಸಹಾಯಕರು, ಶೀಘ್ರಲಿಪಿಗಾರರು ಹಾಗೂ ಬೆರಳಚ್ಚುಗಾರರುಗಳಿಗೆ ಬುನಾದಿ ತರಬೇತಿಯನ್ನು ನೀಡಲಾಗುತ್ತದೆ. ಈ ತರಬೇತಿಗಳು ಭಾರತ ಸರ್ಕಾರ ಆಯೋಜಿಸಿದ ತರಬೇತಿ ಕೋರ್ಸಗಳಂತೆ ಇರುತ್ತದೆ. ಕ್ಷೇತ್ರ ಇಲಾಖೆಗಳ ಮೇಲ್ವಿಚಾರಣಾ ಮಟ್ಟದ ಅಧಿಕಾರಿ/ಸಿಬ್ಬಂದಿಗಳಿಂದ ತರಬೇತಿಯನ್ನು ಜರುಗಿಸಲಾಗುವುದು.

ಸಚಿವಾಲಯ ತರಬೇತಿ ಸಂಸ್ಥೆ

ಸಂಸ್ಥೆಯು 8ನೇ ಮಹಡಿ, ವಿಶ್ವೇಶ್ವರಯ್ಯ ಚಿಕ್ಕ ಗೋಪುರ, ಡಾ: ಅಂಬೇಡ್ಕರ್ ರಸ್ತೆ, ಬೆಂಗಳೂರಿನಲ್ಲಿ ಸ್ಥಾಪಿತವಾಗಿದೆ. ಇದು ವಿಧಾನ ಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡದ ತುಂಬಾ ಹತ್ತಿರವಿದೆ. ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣದಿಂದ ಮತ್ತು ಸಿಟಿ ರೈಲು ನಿಲ್ದಾಣದಿಂದ ಕೇವಲ 3 ಕಿ.ಮಿ. ಅಂತರದಲ್ಲಿದೆ. ಸಚಿವಾಲಯ ತರಬೇತಿ ಸಂಸ್ಥೆಯು 1978ರಲ್ಲಿ ಸ್ಥಾಪನೆಯಾಗಿದೆ. ಇದಕ್ಕೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ  ಈ ಕೆಳಕಂಡ ಸದಸ್ಯರನ್ನು ಒಳಗೊಂಡ ವ್ಯವಸ್ಥಾಪಕ ಸಮಿತಿಯನ್ನು ರಚಿಸಲಾಗಿದೆ;

  1. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಡಳಿತ ಸುಧಾರಣೆ)
  2. ಪ್ರಧಾನ ವ್ಯವಸ್ಥಾಪಕರು, ಆಡಳಿತ ತರಬೇತಿ ಸಂಸ್ಥೆ, ಮೈಸೂರು.
  3. ಸರ್ಕಾರದ ಉಪ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಡಳಿತ ಸುಧಾರಣೆ)
  4. ಸರ್ಕಾರದ ಉಪ ಕಾರ್ಯದರ್ಶಿ, ಆರ್ಥಿಕ ಇಲಾಖೆ(ಆಯವ್ಯಯ ಮತ್ತು ಸಂಪನ್ಮೂಲ).
  5. ನಿರ್ದೇಶಕರು, ಕರ್ನಾಟಕ ಸಚಿವಾಲಯ ತರಬೇತಿ ಸಂಸ್ಥೆ, -ಸದಸ್ಯ ಕಾರ್ಯದರ್ಶಿ.

ಹಾಲಿ ನಿರ್ದೇಶಕರು, ಕರ್ನಾಟಕ ಸಚಿವಾಲಯ ತರಬೇತಿ ಸಂಸ್ಥೆ, ಇವರು ಸರ್ಕಾರದ ಉಪ ಕಾರ್ಯದರ್ಶಿ ದರ್ಜೆಗೆ ಸಮಾನರಾಗಿರುತ್ತಾರೆ.  ಸರ್ಕಾರದ ಸಚಿವಾಲಯ ಮತ್ತು ಸರ್ಕಾರದ ಇತರೆ ಇಲಾಖೆಯ ಅಧಿಕಾರಿಗಳು  ನಿವೃತ್ತ ಅಧಿಕಾರಿಗಳು ಮತ್ತು ಹೊರ ವಿವಿಧ ಸಂಸ್ಥೆಗಳ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕಾರ್ಯಕ್ರಮಗಳಲ್ಲಿ ಉಪನ್ಯಾಸವನ್ನು ನೀಡಲಾಗುತ್ತಿದೆ.

ಇತ್ತೀಚಿನ ನವೀಕರಣ​ : 16-01-2020 03:35 PM ಅನುಮೋದಕರು: Director


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಸರ್ಕಾರ ಸಚಿವಾಲಯ ತರಬೇತಿ ಸಂಸ್ಥೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080